ಸಿ.ಬಿ.ಎಸ್.ಸಿ ಫಲಿತಾಂಶ: ಜಿಎಮ್ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

ಬ್ರಹ್ಮಾವರ: 2022-23 ನೇ ಸಾಲಿನ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಬ್ರಹ್ಮಾವರದ ಜಿಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಿಂದ ಒಟ್ಟು 218 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅತ್ಯುತ್ತಮ ಫಲಿತಾಂಶದೊಂದಿಗೆ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತಿವರ್ಶದಂತೆ ವಿದ್ಯಾರ್ಥಿಗಳು ಈ ಬಾರಿಯೂ ಶೇ.100 ಫಲಿತಾಂಶ ಪಡೆದುಕೊಂಡಿರುತ್ತಾರೆ.

ಶಾಲೆಯ ಈ ಶೈಕ್ಷಣಿಕ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಶಾಲಾ ಪ್ರಾಂಶುಪಾಲರು, ಶೈಕ್ಷಣಿಕ ನಿರ್ದೇಶಕರು ವಿದ್ಯಾರ್ಥಿಗಳನ್ನು, ಪೋಷಕರನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿದ್ದಾರೆ.