ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯಾವರ್ಧಕ ಪಿಯು ಕಾಲೇಜು ಮುಂಡ್ಕೂರು ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಗಣಿತ ನಗರದ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ.
ಜ್ಞಾನಸುಧಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ತಂಡದ ವಿದ್ಯಾರ್ಥಿಗಳಾದ ಸನತ್ ಪಿದೈ, ಪ್ರತೀಕ್, ಮತ್ತು ಅಂಕಿತ್ ಜಿಲ್ಲಾ ಮಟ್ಟದಲ್ಲಿ ನಡೆಯುವ ಬಾಲಕರ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಕು.ಸ್ವಾತಿ ಶೆಟ್ಟಿ ಹಾಗೂ ಸನತ್ ಪಿದೈ ಪಂದ್ಯಾಟದ ಸವ್ಯಸಾಚಿ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.