ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಭುವನೇಂದ್ರ ಪಿಯು ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ. ಬಾಲಕರ ತಂಡದ ನಿಶಾಂತ್ ನರಸಿಂಹ ಹೆಗ್ಡೆ ಹಾಗೂ ಬಾಲಕಿಯರ ತಂಡದ ಸಾರ ಕ್ಷೇವಿಯರ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹರ್ಷವ್ಯಕ್ತಪಡಿಸಿದ್ದಾರೆ.












