ಮಂಗಳೂರು: ಶುಕ್ರವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ ಗೋಹತ್ಯೆ ನಿಷೇಧ ಜಾರಿ ಮಾಡಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಆಗ್ರಹಿಸಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ದೇಶದಲ್ಲಿ ಗೋಹತ್ಯೆ ನಿಷೇಧ ಅಗತ್ಯ ವಾಗಿದೆ ಎಂದರು.
ಜತೆಗೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮೋದಿಯವರು ಕಾರ್ಯಕ್ರಮ ತರಬೇಕು. ಹಾಗೆಯೇ ಕೃಷಿ ಮತ್ತು ವೈದ್ಯಕೀಯಕ್ಕೆ ಬಜೆಟ್ ನಲ್ಲಿ ಹೆಚ್ಚು ಒತ್ತು ನೀಡಬೇಕೆಂದು ಶ್ರೀಗಳಿ ಮನವಿ ಮಾಡಿದರು.