ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮಹಿಳೆಯರಿಗೆ ಸಿಹಿಸುದ್ದಿ ನೀಡಿದೆ. ಬಾಕಿ ಉಳಿದಿರುವ 33ನೇ ಕಂತಿನ ಹಣವನ್ನು ಇದೇ ತಿಂಗಳು ಅರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ.
ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸರ್ಕಾರ ಇಂದಿನಿಂದ ಮನೆ-ಮನೆ ಸರ್ವೆ ಕಾರ್ಯ ಆರಂಭಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ಪೂರ್ಣಗೊಳ್ಳುವವರೆಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡದಿರಲು ಈ ಹಿಂದೆ ಇಲಾಖೆ ನಿರ್ಧರಿಸಿತ್ತು.
ಆದರೆ, ನಿನ್ನೆ ಗ್ಯಾರಂಟಿ ಪ್ರಾಧಿಕಾರದ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ 33ನೇ ಕಂತಿನ ಹಣವನ್ನು ಇದೇ ತಿಂಗಳು ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೀಗಾಗಿ ಅನರ್ಹರ ಪತ್ತೆಗಾಗಿ ಮನೆ-ಮನೆ ಸರ್ವೆ ನಡೆಯುತ್ತಿದ್ದರೂ, ಅರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ 33ನೇ ಕಂತಿನ ಹಣ ಸಿಗಲಿದೆ.ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಇದೇ ತಿಂಗಳು 33ನೇ ಕಂತಿನ ಹಣ ಜಮೆ ಆಗಲಿದೆ.















