ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕೊರೊನಾ ಸೋಂಕು ಇಳಿಮುಖ ಹಾದಿಯಲ್ಲಿ ಸಾಗುತ್ತಿದ್ದು, ಇದರಿಂದ ಜನತೆಯ ಆತಂಕ ಸ್ವಲ್ಪಮಟ್ಟಿಗೆ ದೂರಾಗಿದೆ.
ಮೊನ್ನೆ 20 ಸಾವಿರಕ್ಕಿಂತ ಹೆಚ್ಚಿನ ಕೇಸ್ ಪತ್ತೆಯಾಗಿತ್ತು. ಸೋಮವಾರ ಅದು 16,604 ಕ್ಕೆ ತಗ್ಗಿದೆ. ಈ ಮೂಲಕ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಕಡಿಮೆಯಾಗಿವೆ. ಅಲ್ಲದೇ 44,473 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಬೆಂಗಳೂರಿನಲ್ಲೂ 4 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗಿದ್ದು ಜನರಿಗೆ ಸಮಾಧಾನ ತಂದಿದೆ. ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 13.57ಕ್ಕೆ ಇಳಿದಿದ್ರೆ, ಮರಣ ಪ್ರಮಾಣ ದರ 2.47 ಇದೆ.