ಉಡುಪಿ, ಜುಲೈ 17: ಕನಿಷ್ಠ 50 ಸ್ವದೇಶಿ ಜಾನುವಾರುಗಳನ್ನು ಕಳೆದ 3 ವರ್ಷಗಳಿಂದ ಪೋಷಿಸುತ್ತಿದ್ದು, ನೋಂದಾಯಿತ ಟ್ರಸ್ಟ್ ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ 2019-20 ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದು, ಆಸಕ್ತ ಗೋಶಾಲೆಯವರು ಜುಲೈ 22 ರ ಒಳಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ಕಚೇರಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿಯ ಕಚೇರಿ ದೂರವಾಣಿ ಸಂಖ್ಯೆ: 0820-2534024 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












