ಉಡುಪಿ: ರಾಜ್ಯ ಸರ್ಕಾರ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿ ಹೊರಡಿಸಿರುವ ನೂತನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜತೆಗೆ ಸರಳವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಂಭಾಂಗಣದಲ್ಲಿ ಗುರುವಾರ ನಡೆದ ಗಣೇಶ ಹಬ್ಬ ಆಚರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊರೊನಾಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿ ಮಾರ್ಗ ಸೂಚಿಯನ್ನು ಹೊರಡಿಸಿದೆ. ಸಾರ್ವಜನಿಕರು ಮಾರ್ಗ ಸೂಚಿಯನ್ನು ಅನುಸರಿಸವುದರೊಂದಿಗೆ ಸರಳವಾಗಿ ಶೃದ್ದ ಭಕ್ತಿಯಿಂದ ಹಬ್ಬವನ್ನು ಆಚರಿಸಬೇಕು ಎಂದರು.
ಗಣೇಶನ ಮೂರ್ತಿ ಪ್ರತಿಷ್ಠಾಪಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳದಲ್ಲಿ ಪ್ರತಿದಿನ ಸಾನಿಟೈಸ್ ಮಾಡಬೇಕು. ದರ್ಶನಕ್ಕೆ ಬರುವ ಭಕ್ತಾಧಿಗಳಿಗೆ ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಲ್ಲದೆ ಥರ್ಮಲ್ ಸ್ಕ್ರಿನಿಂಗ್ ಮಾಡಬೇಕು. ಭಕ್ತರು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕು ಎಂದು ಸೂಚನೆ ನೀಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃಂತಿಕ, ಸಂಗೀತ, ನೃತ್ಯ ಇನ್ನಿತರೆ ಯಾವುದೇ ಮನೊರಂಜನೆ ಕಾರ್ಯಕ್ರಮಗಳನ್ನು ಆಯೋಜನೆಗೆ ಅವಕಾಶ ಇರುವುದಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿತರಿಸುವಾಗ ಯವುದೇ ರೀತಿಯ ಮರೆವಣೆಗೆ ಮಾಡುವುದನ್ನು ನಿರ್ಬಂಧಿಸಿದೆ ಎಂದರು.
ಪಾರಂಪರಿಕ ಗಣೇಶೋತ್ಸವ ಕ್ಕಾಗಿ ಗಣೇಶೋತ್ಸವ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾನ ಮಾಡುವ ಮುನ್ನ ಸ್ಥಳೀಯ ಸಂಸ್ಥೆಗಳ ಪೂರ್ವನುಮತಿ ಪಡೆಯಬೇಕು ಎಂದು ಅವರು ಗಣೇಶ ಮೂರ್ತಿ ಪ್ರತಿಷ್ಟಾನದ ಸ್ಥಳ ದಲ್ಲಿ 20 ಕ್ಕಿಂತ ಹೆಚ್ಚು ಜನರು ಸೇರದಂತೆ ಎಚ್ಚರ ವಹಿಸ ಬೇಕು ಎಂದರು
ಎಸ್ಪಿ ವಿಷ್ಟುವರ್ಧನ್ ಮಾತನಾಡಿ, ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಶಾಂತಿ ಸೌಹರ್ದತೆ ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಕಾನೂನಿನ ಪರಿಮಿತಿಯಲ್ಲಿ ಹಬ್ಬ ಆಚರಣೆ ಮಾಡಬೇಕು ಎಂದರು.
ಸಭೆಯಲ್ಲಿ ಉಪ ವಿಭಾಗ ಅಧಿಕಾರಿ ರಾಜು, ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಕಿರಣ್ ಪಟ್ನೇಕರ್, ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.