ಸೋಲುವ ಭಯದಿಂದ ತಾ.ಪಂ, ಜಿ.ಪಂ ಚುನಾವಣೆ ನಡೆಸಲು ಸರ್ಕಾರ ಹಿಂದೇಟು; ಎಂ.ಡಿ.ಲಕ್ಷ್ಮೀನಾರಾಯಣ ಆರೋಪ

ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಸೋಲಲಿದೆ ಎಂಬ ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿದ್ದು, ಇದರಿಂದ ಬಿಜೆಪಿ ನಡುಕ ಶುರುವಾಗಿದೆ. ಹೀಗಾಗಿ ತಾ.ಪಂ, ಜಿ.ಪಂ ಮಾತ್ರವಲ್ಲ, ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಹಿಂದುಳಿದ ಘಟಕಗಳ ರಾಜ್ಯಾಧ್ಯಕ್ಷ ಎಂ.ಡಿ. ಲಕ್ಷ್ಮಿನಾರಾಯಣ ದೂರಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರಲ್ಲಿ ಬರುವ ವಿಧಾನಸಭೆ ಚುನಾವಣೆ ಅನ್ನು ಯಾವುದೇ ಕಾರಣಕ್ಕೂ ಅವರಿಗೆ ಮುಂದೂಡಲು ಸಾಧ್ಯವಿಲ್ಲ ಎಂದರು.

ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವಶ ಆಗಬೇಕಿದೆ. ಅಲ್ಲಿಯವರೆಗೆ ನಾವು ವಿರಾಮಿಸುವುದಿಲ್ಲ ಎಂದು ಅವರು ಹೇಳಿದರು.