ಸರ್ಕಾರದ ಆದೇಶ ಹಿಜಾಬ್ ವಿವಾದದ ಹೋರಾಟಕ್ಕೆ ಸಂದ ಗೆಲುವು: ಯಶ್ ಪಾಲ್ ಸುವರ್ಣ ಹರ್ಷ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಇದು ಹಿಜಾಬ್ ವಿವಾದದ ವಿಚಾರದಲ್ಲಿ ನಡೆದ ಹೋರಾಟಕ್ಕೆ ಸಂದ ಪ್ರಥಮ ಗೆಲುವು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಬಣ್ಣಿಸಿದ್ದಾರೆ.

ಹಿಂದೂ ಸಂಘಟನೆಗಳ ಮನವಿಗೆ ಸ್ಪಂದಿಸಿ ಆದೇಶ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನು ಹಾಕಬೇಕು ಎಂದು ಆದೇಶ ನೀಡಿದೆ.

ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸುವಂತೆ ಆದೇಶಿಸುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆತರಲು ಯತ್ನಿಸುತ್ತಿದ್ದ ಮತೀಯವಾದಿ ರಾಷ್ಟ್ರ ವಿರೋಧಿ ಸಂಘಟನೆಗೆ ತಕ್ಕ ಉತ್ತರ ನೀಡಿದೆ ಎಂದರು.

ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲೂ  ನಮ್ಮ ಹೋರಾಟಕ್ಕೆ ಗೆಲುವು ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.