ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಸೇನೆಯ ಸೇವೆಗಳಿಗೆ ಯಾವುದೇ ನೇಮಕಾತಿ ನಡೆದಿಲ್ಲವಾದ್ದರಿಂದ ಈ ವರ್ಷ ಯೋಜನೆಯ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆಯನ್ನು ಕೇಂದ್ರ ರಕ್ಷಣಾ ಸಚಿವಾಲಯವು ಘೋಷಿಸಿದ್ದು, ಈಗ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸನ್ನು 21 ರಿಂದ 23 ಕ್ಕೆ ಏರಿಸಲಾಗಿದೆ.
ನೇಮಕಾತಿ ಸ್ಥಗಿತಗೊಂಡಿದ್ದಾಗ, 2020 ರಲ್ಲಿ 21 ವರ್ಷ ವಯಸ್ಸು ಪೂರ್ತಿಗೊಳಿಸಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಈ ವರ್ಷಕ್ಕೆ ಮಾತ್ರ ಅರ್ಹರಾಗಲು ಅವಕಾಶ ನೀಡಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಮಂಗಳವಾರ ಘೋಷಿಸಲಾದ ಮೂಲ ಯೋಜನೆಯಡಿ, 17.50 ವರ್ಷದಿಂದ 21 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ನೇಮಕಾತಿಗೆ ಅರ್ಹರಾಗಿದ್ದರು. ಆದರೆ ಗುರುವಾರ, ರಕ್ಷಣಾ ಸಚಿವಾಲಯವು “2022 ಕ್ಕೆ ಅಗ್ನಿಪಥ್ ಯೋಜನೆ ನೇಮಕಾತಿ ಪ್ರಕ್ರಿಯೆಯ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ಹೆಚ್ಚಿಸಲಾಗಿದೆ” ಎಂದು ಹೇಳಿದೆ.












