ಕಾಪು: ಬಿಲ್ಲವ- ಈಡಿಗ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪನೆ ಕುರಿತ ಪ್ರಸ್ತಾಪ ಸ್ವಾಗತಾರ್ಹವಾದುದು. ಸಮುದಾಯದ ಬೇಡಿಕೆಗಳಿಗೆ ಅನುಗುಣವಾಗಿ ಸ್ಪಂದಿಸುವುದು ಸರ್ಕಾರ ಜವಾಬ್ದಾರಿಯಾಗಿದೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಹೇಳಿದರು.
ಬೆಳಪು ಗ್ರಾಮದ ನಿರ್ಮಾಣ ಹಂತದಲ್ಲಿರುವ ಮಂಗಳೂರು ವಿವಿ ಸಂಯೋಜಿತ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಪುವಿನ ಬೆಳಪುವಿನಲ್ಲಿ ರಾಜ್ಯಕ್ಕೆ ಮಾದರಿಯಾಗಬಲ್ಲ, ವಿಜ್ಞಾನ ಸಂಶೋಧನಾ ಕೇಂದ್ರ, ಸರಕಾರಿ ಪಾಲೆಟ್ನಿಕ್ ಕಾಲೇಜು ಮತ್ತು ಸಣ್ಣ ಕೈಗಾರಿಕಾ ಪಾರ್ಕ್ ನಿರ್ಮಾಣವಾಗುತ್ತಿದೆ. ಇದನ್ನು ಅತೀ ಶೀಘ್ರದಲ್ಲಿ ನಿರ್ಮಾಣ ಮಾಡಲು ಬೇಕಾದ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ. ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಬೆಳಪು ಗ್ರಾ.ಪಂ. ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.












