ಬೈಂದೂರು: ತಾಲೂಕಿನ ಖಂಬದ ಕೋಣೆಯಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆಗೆ ಸೀ ಫುಡ್ ಪಾರ್ಕ್ ಅನ್ನು ಸಾರ್ವಜನಿಕ ಕಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದು, ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮುಂದಾದ ಸರ್ಕಾರಕ್ಕೆ ಶೆಫ್ ಟಾಕ್ ಫುಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ ಲಿ ನ ಸಂಸ್ಥಾಪಕ ಗೋವಿಂದ ಬಾಬು ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.