ನವದೆಹಲಿ: ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಈ ವರ್ಷದ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ 44 ಸಾವಿರದ 762 ಕೋಟಿ ರೂಪಾಯಿ ಯೋಜನೆಗಾಗಿ ವೆಚ್ಚವಾಗಲಿದೆ. ಈ ಯೋಜನೆಯಡಿ ಈವರೆಗೆ ಸುಮಾರು ಮೂರು ಲಕ್ಷದ 45 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು ಮಾಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ವಿಸ್ತರಿಸುವ ಕ್ಯಾಬಿನೆಟ್ ನಿರ್ಧಾರವು ಭಾರತದಾದ್ಯಂತ ಕೋಟ್ಯಂತರ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಈ ಹಬ್ಬದ ಋತುವಿನಲ್ಲಿ ಬೆಂಬಲವನ್ನು ಖಚಿತಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇಂದ್ರ ಸಚಿವ ಸಂಪುಟವು ಡಿಎ ಮತ್ತು ಡಿಆರ್ ನಲ್ಲಿ ನಾಲ್ಕು ಪ್ರತಿಶತ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಇದರಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ.