Govt Job Alert: ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ 869 ಹುದ್ದೆಗಳಿಗೆ ನೇಮಕಾತಿ: ಅ.15 ಅರ್ಜಿ ಸಲ್ಲಿಕೆಗೆ ಕೊನೆ ದಿನ, ಆಸಕ್ತರಾ? ಕೂಡಲೇ ಅರ್ಜಿ ಹಾಕಿ

ಬೆಂಗಳೂರು: ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ 869 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಒಟ್ಟು 869 ಹುದ್ದೆಗಳಲ್ಲಿ 293 ಹುದ್ದೆಗಳು ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಮೀಸಲಾಗಿವೆ.

ಹುದ್ದೆಗಳ ವಿವರ

ಉಳಿಕೆ ಮೂಲ ವೃಂದ:

  • ವಾರ್ಡರ್‌ – 560
  • ದ್ವಿತೀಯ ದರ್ಜೆ ಬೋಧಕರು – 16

ಕಲ್ಯಾಣ ಕರ್ನಾಟಕ ವೃಂದ:

  • ಜೈಲರ್‌ – 5
  • ವಾರ್ಡರ್‌ – 275
  • ದ್ವಿತೀಯ ದರ್ಜೆ ಬೋಧಕರು – 8
  • ವಾರ್ಡರ್‌ ಕಮ್‌ ನರ್ಸಿಂಗ್‌ – 5

ವಿದ್ಯಾರ್ಹತೆ

ಜೈಲರ್‌ ಹುದ್ದೆಗೆ ಪದವಿ ಉತ್ತೀರ್ಣರಾಗಿರಬೇಕು. ವಾರ್ಡರ್‌ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ದ್ವಿತೀಯ ದರ್ಜೆ ಬೋಧಕರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ಡಿಪ್ಲೊಮಾ ಹಾಗೂ ವಾರ್ಡರ್‌ ಕಮ್‌ ನರ್ಸಿಂಗ್‌ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ಪ್ರಥಮ ಚಿಕಿತ್ಸಾ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷ ಹಾಗೂ ಗರಿಷ್ಠ ವಯೋಮಿತಿ 33 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ, 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ ₹750 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ

ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗದಷ್ಟು ಅಂಕವನ್ನು ಕಡಿತಗೊಳಿಸಲಾಗುತ್ತದೆ. ಇದಾದ ಬಳಿಕ ದೇಹದಾರ್ಢ್ಯತೆ ಹಾಗೂ ಸಹಿಷ್ಣುತೆ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್‌ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್‌ 21ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ ಪರಿಶೀಲಿಸಬಹುದು.