ಮೈಸೂರು: ರಾಜ್ಯ ಸರ್ಕಾರವು ಶೀಘ್ರವೇ ಲೋಕಾಯುಕ್ತರನ್ನು ನೇಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ.
ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲೋಕಾಯುಕ್ತರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂರು ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲ್ಲಲಿದ್ದಾರೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಆಫರ್ಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.