ಬೆಂಗಳೂರು: ರಾಜ್ಯ ಸರ್ಕಾರವು ನವೆಂಬರ್ 17ರಿಂದ ಇಂಜನಿಯರ್, ಡಿಪ್ಲೊಮಾ, ಪಿಜಿ, ಪದವಿ ಕಾಲೇಜುಗಳನ್ನು ಮತ್ತೆ ಆರಂಭಿಸಲು ನಿರ್ಧರಿಸಿದೆ.
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನವೆಂಬರ್ 17ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ತರಗತಿಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿಯೂ ಕಲಿಯಬಹುದು ಅಥವಾ ತರಗತಿಗಳಿಗೂ ಬರಬಹುದು. ತರಗತಿಗೆ ಬರುವ ಮೊದಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಪೋಷಕರಿಂದ ಅನುಮತಿ ಪತ್ರ ತರಬೇಕು ಎಂದು ಡಿಸಿಎಂ ಅಶ್ವಥನಾರಾಯಣ ತಿಳಿಸಿದರು.
ಮೊದಲು ಇಂಜನಿಯರ್, ಡಿಪ್ಲೊಮಾ, ಪಿಜಿ, ಪದವಿ ಕಾಲೇಜುಗಳು ತೆರೆಯಲು ನಿರ್ಧಾರ ಮಾಡಲಾಗಿದೆ. ಪ್ರ್ಯಾಕ್ಟಿಕಲ್ ತರಗತಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.