ನವೆಂಬರ್ 1ರಿಂದ ಪದವಿ ಕಾಲೇಜುಗಳ ತರಗತಿ ಆರಂಭ: ಯುಜಿಸಿಯಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ನವದೆಹಲಿ: ನವೆಂಬರ್ 1ರಿಂದ ಪದವಿ ಕಾಲೇಜುಗಳ ಮೊದಲ ಸೆಮಿಸ್ಟರ್‌ ತರಗತಿಗಳು ಆರಂಭವಾಗಲಿವೆ. ಯುಜಿಸಿಯ ಪರಿಷ್ಕೃತ ಮಾರ್ಗಸೂಚಿಗಳನ್ನು ಕೇಂದ್ರ ಶಿಕ್ಷಣ ಸಚಿವಾಲಯ ಮಂಗಳವಾರ ಅಂಗೀಕರಿಸಿದೆ.

ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್’ ವಿಶ್ವವಿದ್ಯಾಲಯಗಳ 2020-21ರ ಸಾಲಿನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ಶೈಕ್ಷಣಿಕ ವೇಳಾಪಟ್ಟಿಯ ಯುಜಿಸಿ ಮಾರ್ಗಸೂಚಿಗಳನ್ನು ಅನುಮೋದಿಸಿದೆ’ ಎಂದು ತಿಳಿಸಿದ್ದಾರೆ.

ಒಂದು ವೇಳೆ ಪ್ರವೇಶ ರದ್ದತಿಯಾದರೆ ಶುಲ್ಕದ ಪೂರ್ಣ ಮರುಪಾವತಿ ಮಾಡಲಾಗುವುದು. ಲಾಕ್‌ಡೌನ್ ಸಂಬಂಧಿತ ಕಾರಣಗಳಿಂದಾಗಿ ಪೋಷಕರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ತಪ್ಪಿಸಲು 2020ರ ನವೆಂಬರ್ 30 ರವರೆಗೆ ಪ್ರವೇಶ ಅಥವಾ ವಲಸೆ ವಿದ್ಯಾರ್ಥಿಗಳ ಪ್ರವೇಶ ರದ್ಧತಿಯ ಶುಲ್ಕದ ಸಂಪೂರ್ಣ ಮರುಪಾವತಿ ಮಾಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.