ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13ನೇ ವರ್ಷದ ಪದವಿ ಪ್ರಧಾನ ಸಮಾರಂಭವು 11 ನೇ ಅಕ್ಟೋಬರ್ 2026 ಭಾನುವಾರದಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಅಂದು 2025-26ನೇ ಶೈಕ್ಷಣಿಕ ವರ್ಷದಲ್ಲಿ ಅಂತಿಮ ವರ್ಷದ ಬಿ. ಇ. ಮತ್ತು ಎಮ್. ಬಿ. ಎ. ಪದವಿ ಪೂರೈಸಿದ ಅರ್ಹ ಪದವೀಧರರಿಗೆ ಪದವಿ ಪ್ರಮಾಣ ಪತ್ರ ಹಾಗೂ ಪ್ರತೀ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದವರಿಗೆ ಚಿನ್ನದ ಪದಕವನ್ನು ನೀಡಲಾಗುವುದು. ಇದಲ್ಲದೆ 2025-26 ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ರ್ಯಾಂಕ್ ಪಡೆದ ಸಂಸ್ಥೆಯ ವಿದ್ಯಾರ್ಥಿನಿಯ ಸಾಧನೆಯನ್ನು ಗೌರವಿಸಲಾಗುವುದು.
ದಾವಣಗೆರೆ ವಿಶ್ವವಿದ್ಯಾಲಯದ ಮಾನ್ಯ ಉಪಕುಲಪತಿಗಳಾದ ಡಾ. ಬಿ ಇ ರಂಗಸ್ವಾಮಿ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ವೆಂಕಪ್ಪಯ್ಯ ಆರ್. ದೇಸಾಯಿ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಸೋದೆ ವಾದಿರಾಜ ಮಠದ ಪರಮ ಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಅಧ್ಯಕ್ಷತೆ ವಹಿಸಲಿದ್ದಾರೆ.















