ಬ್ರಹ್ಮಾವರ: ಫಾರ್ಚ್ಯೂನ್ ಅಕಾಡೆಮಿಕ್ ಎಂಡ್ ಚಾರಿಟೇಬಲ್ ಟ್ರಸ್ಟ್(ರಿ) ಇದರ ಆಡಳಿತಕೊಳಪಟ್ಟ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಇದರ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವು ಸೆ.30 ರಂದು ಜರುಗಿತು.
ಸಮಾರಂಭದ ಮುಖ್ಯ ಅತಿಥಿಯಾಗಿ ಉಡುಪಿ ಸರಕಾರಿ ಆಸ್ಪತ್ರೆಯ ಅರಿವಳಿಕೆ ತಜ್ಞ ಡಾ. ಗಣಪತಿ ಹೆಗ್ಡೆ ಆಗಮಿಸಿ, ಬಿ.ಎಸ್.ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ನೀಡಿ ಶುಭ ಕೋರಿದರು.
ಸಾಮಾಜಿಕ ಹಾಗೂ ಶೈಕ್ಷಣಿಕ ಸಂಸ್ಥೆ ಹಂಗಾರಕಟ್ಟೆ ಇದರ ಕಾರ್ಯದರ್ಶಿ ಹೆಚ್. ಇಬ್ರಾಹಿಂ ಸಾಹೇಬ್ ಆಗಮಿಸಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.
ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನ ಅಧ್ಯಕ್ಷ ಡಾ. ಡೈವಿಕ್ ಟಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಕಾಲೇಜಿನ ಅಂತಿಮ ಬಿ.ಎಸ್.ಸಿ ಪದವೀಧರರು 96.55% ಫಲಿತಾಂಶ ಗಳಿಸಿರುವುದಕ್ಕೆ ವಂದನೆ ಸಲ್ಲಿಸಿ, 100% ಉದ್ಯೋಗ ಖಾತ್ರಿಯ ಭರವಸೆ ನೀಡಿದರು.
ಕಾಲೇಜಿನ ಅಧ್ಯಕ್ಷ ತಾರನಾಥ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕಿಯರಾದ ವೀಣಾ ಹಾಗೂ ಅಂಬಿಕಾ ನಿರೂಪಿಸಿದರು. ಪ್ರಾಂಶುಪಾಲೆ ಪ್ರೊ. ಸ್ಮಿತಾ ಮೋಲ್ ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಸಹ ಪ್ರಾಧ್ಯಾಪಕಿ ಸೆಲ್ಮಾ ಲೂವಿಸ್ ವಂದಿಸಿದರು.
ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.