ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿ ಸಭೆ

ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸಲು ಜೂನ್ 17 ರಂದು ಬೆಳಗ್ಗೆ 10.30 ಕ್ಕೆ ಬ್ರಹ್ಮಾವರ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಹತ್ತಿರದ ಹೋಟೆಲ್ ಆಶ್ರಯ ಚಂದಮ್ಮ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ, ಜೂ. 19 ರಂದು ಬೆಳಗ್ಗೆ 10.30 ಕ್ಕೆ ಹೆಬ್ರಿ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಹೆಬ್ರಿ ಶ್ರೀ ಅನಂತ ಪದ್ಮನಾಭ ಸನ್ನಿಧಿ ಸಭಾಭವನ, ಜೂ. 20 ರಂದು ಬೈಂದೂರು ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಬೆಳಗ್ಗೆ 10.30 ಕ್ಕೆ ಬೈಂದೂರು ಬಂಟರ ಭವನದಲ್ಲಿ ಹಾಗೂ ಕುಂದಾಪುರ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಮಧ್ಯಾಹ್ನ 3.30 ಕ್ಕೆ ಕೋಟೇಶ್ವರದ ಯುವ ಮೆರೆಡಿಯನ್‌ನಲ್ಲಿ, ಕಾಪು ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಜೂ. 22 ರಂದು ಬೆಳಗ್ಗೆ 10.30 ಕ್ಕೆ ಕಾಪು ಲಕ್ಷ್ಮೀ ಜನಾರ್ಧನ
ಸಭಾಭವನ, ಜೂ. 23 ರಂದು ಕಾರ್ಕಳ ತಾಲೂಕು ಗ್ರಾಮ ಪಂಚಾಯತ್ ಸದಸ್ಯರು ಬೆಳಗ್ಗೆ 10.30 ಕ್ಕೆ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಹಾಗೂ ಮಧ್ಯಾಹ್ನ 3.30 ಕ್ಕೆ ಉಡುಪಿ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ತಪ್ಪದೇ ಹಾಜರಾಗುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.