ಸಮಾಜ ಸೇವಕ ಬಾಬಾ ಅಮ್ಟೆ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಮುಂಬೈ: ಸಮಾಜ ಸೇವಕ ಬಾಬಾ ಅಮ್ಟೆ ಅವರ ಮೊಮ್ಮಗಳು, ಆನಂದವನ್ ಮಹಾರೋಗಿ ಸೇವಾ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶೀತಲ್ ವಿಕಾಸ್ ಅಮ್ಟೆ ಕಾರಜಿಗಿ ಅವರು ಮಹಾರಾಷ್ಟ್ರದ ವರೋರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡಾ. ಶೀತಲ್ ವಿಕಾಸ್ ಅಮ್ಟೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಡಾ. ಶೀತಲ್ ಇತ್ತೀಚೆಗೆ ಮಹಾರೋಗಿ ಸೇವಾ ಸಮಿತಿಯ ಅಕ್ರಮಗಳ ಬಗ್ಗೆ ಆರೋಪ ಮಾಡಿದ್ದರು. ಟ್ರಸ್ಟ್ ಮ್ಯಾನೇಜ್‌ಮೆಂಟ್ ಮತ್ತು ಅವರ ಕುಟುಂಬವನ್ನು ದೂಷಿಸಿದ್ದರು.