ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಕಾರ್ಕಳ ಶಾಸಕ ಸುನೀಲ್ ಕುಮಾರ್ ಸಹಿತ ಐವರಿಗೆ ಸಚಿವ ಸ್ಥಾನ ?.

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನೀಲ್ ಕುಮಾರ್ ಸಹಿತ ಐವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 3 ಅಥವಾ 5 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿರುವ ಎಂ.ಟಿ. ನಾಗರಾಜ್, ಆರ್. ಶಂಕರ್, ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹಾಗೂ ಅರವಿಂದ ಲಿಂಬಾವಳಿ ಸಚಿವ ಸಂಪುಟ ಸೇರಲಿದ್ದಾರೆ ಎಂದು ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಸಿಎಂ ಯಡಿಯೂರಪ್ಪನವರು ದೆಹಲಿ ಭೇಟಿ ನೀಡಿ ವರಿಷ್ಠರಿಂದ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಆದರೆ ಅಧಿವೇಶದ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿದು ಬಂದಿದೆ.