ಸೆ. 21ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್: ಷರತ್ತುಗಳಿಗೆ ಈ ಸುದ್ದಿ ನೋಡಿ

ನವದೆಹಲಿ: ಶಾಲಾ-ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ.

ಸ್ವಯಂ ಪ್ರೇರಿತರಾಗಿ ವಿದ್ಯಾರ್ಥಿಗಳು ಬಂದರೆ ಸೆಪ್ಟೆಂಬರ್ 21ರಿಂದ 9 ತರಗತಿಯಿಂದ ದ್ವಿತೀಯ ಪಿಯುಸಿ ತರಗತಿಗಳನ್ನು ಭಾಗಶಃ ಪುನರಾರಂಭಿಸಬಹುದು ಎಂದು ಇಂದು ಪ್ರಕಟಿಸಿದ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅನುಕೂಲ ಮಾಡಿಕೊಡಲಾಗಿದ್ದು, ಶಾಲೆಗಳಲ್ಲಿ ನಿರ್ದಿಷ್ಟ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಯಲ್ಲಿ ಶೇ. 50 ರಷ್ಟು ಮಾತ್ರ ಬೋಧಕ, ಬೋಧಕೇತರ ಸಿಬ್ಬಂದಿ ಇರಬೇಕು ಎಂದು ತಿಳಿಸಿದೆ.

ಶಾಲೆಗೆ ಬರುವ ವಿದ್ಯಾರ್ಥಿಗಳು, ಶಿಕ್ಷಕರು, ಉದ್ಯೋಗಿಗಳು ಕೊರೊನಾ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಶಾಲೆಗೆ ಬರುವ ವಿದ್ಯಾರ್ಥಿಗಳ ಪೋಷಕರಿಂದ ಲಿಖಿತ ಒಪ್ಪಿಗೆ ಪಡೆದುಕೊಳ್ಳಬೇಕು ಎಂದು ಹೇಳಿದೆ.

ಕಂಟೈನ್ಮೆಂಟ್ ಝೋನ್ ನಲ್ಲಿರುವ ಶಾಲೆಗಳನ್ನು ಆರಂಭಿಸಬಾರದು. ಹಾಗೆ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗದಂತೆ ಸೂಚನೆ ನೀಡಿದೆ. ಕ್ಯಾರೆಂಟೈನ್ ಕೇಂದ್ರಗಳಾಗಿ ಬಳಸಲಾಗುತ್ತಿದ್ದ ಶಾಲೆಗಳನ್ನು ಪುನರಾರಂಭಿಸುವ ಮೊದಲು ಸರಿಯಾಗಿ ಸ್ವಚ್ಛಗೊಳಿಸಬೇಕು ಎಂದು ಸೂಚನೆ ನೀಡಿದೆ.