ಉಡುಪಿ: ಇಂದು ಗೃಹಜ್ಯೋತಿ ಯೋಜನೆಗೆ ಚಾಲನೆ

ಉಡುಪಿ: ಇಂಧನ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕುಂಜಿಬೆಟ್ಟು ಕ.ವಿ.ಪ್ರ.ನಿ.ನಿ ನೌಕರರ ಸಂಘದ ಸಭಾಭವನದಲ್ಲಿ ಚಾಲನೆ ನೀಡಲಾಗುವುದು.

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ಯಶ್ಪಾಲ್ ಸುವರ್ಣ, ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ,
ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ.ವಿ.ನಿ.ನಿ ಹಾಗೂ ಕ.ವಿ.ಪ್ರ.ನಿ.ವಿ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ
ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ ಹಾಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.