ಮನೆಯೊಡತಿಯರಿಗೆ ಸದ್ಯಕ್ಕಿಲ್ಲ ಲಕ್ಷ್ಮೀ ಕಟಾಕ್ಷ: ಗೃಹಲಕ್ಷ್ಮೀ ಯೋಜನೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಅರ್ಜಿದಾರರು ಎದುರಿಸುತ್ತಿರುವ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸಲು ಗೃಹಲಕ್ಷ್ಮಿ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಪಕ್ಷದ ಚುನಾವಣಾ ಖಾತರಿಗಳಲ್ಲಿ ಒಂದಾಗಿದ್ದು, ಇದು ರಾಜ್ಯಾದ್ಯಂತ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ ನೀಡುವ ವಾಗ್ದಾನ ಹೊಂದಿದೆ.

ಯೋಜನೆ ಅನುಷ್ಠಾನಕ್ಕೆ ವಿರಾಮ ನೀಡುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ.

ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಭ್ರಷ್ಟಾಚಾರ ಮುಕ್ತ ವಾತಾವರಣವನ್ನು ಖಾತ್ರಿಪಡಿಸಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪುನರ್ ರಚಿಸಲಾಗುವುದು ಎಂದಿದ್ದಾರೆ.

ಏಜೆನ್ಸಿಗಳು ಅರ್ಜಿ ತುಂಬಲು ಅರ್ಜಿದಾರರಿಂದ ಹಣ ವಸೂಲಿ ಮಾಡುತ್ತಿವೆ ಎನ್ನುವ ದೂರುಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ತಾತ್ಕಾಲಿಕ ತಡೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.