ಮಾರ್ಚ್ 13: ಎಂಜಿಎಂ ಕ್ರೀಡಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

ಉಡುಪಿ: ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 13 ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಕುಂಜಿಬೆಟ್ಟುವಿನ ಮಹಾತ್ಮ ಗಾಂಧೀ ಮೆಮೋರಿಯಲ್ ಕಾಲೇಜಿನ ಆರೂರು ಲಕ್ಷ್ಮೀ ನಾರಾಯಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮಾರ್ಚ್ 13 ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಂಧನ ಸಚಿವ ಕೆ.ಜೆ ಜಾರ್ಜ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಖ ಖರ್ಗೆ, ಕಾರ್ಮಿಕ ಸಚಿವ
ಸಂತೋಷ್ ಎಸ್ ಲಾಡ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಹಿಂದುಳಿದ ವರ್ಗಗಳ ಇಲಾಖೆ ಸಚಿವ ತಂಗಡಗಿ ಶಿವರಾಜ್ ತಂಗಪ್ಪ, ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಉನ್ನತ ಶಿಕ್ಷಣ ಸಚಿವ ಎನ್.ಸಿ ಸುಧಾಕರ್ ಹಾಗೂ ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪೆರ್ಡೂರು ಪಂಚಾಯತ್ ಸದಸ್ಯ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ(ಉತ್ತರ) ಅಧ್ಯಕ್ಷ ಸಂತೋಷ್ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.