ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ 16 ಆಗಸ್ಟ್ 2025 ರಂದು ಸರಕಾರಿ ಪಿ ಯು ಕಾಲೇಜು (ಹೈಸ್ಕೂಲ್ ವಿಭಾಗ) ಬ್ರಹ್ಮಾವರ, ಕೆ ಪಿ ಎಸ್ ಹಿರಿಯಡ್ಕ ಮತ್ತು ಎಸ್ ಎಲ್ ಜೆ ಐ ಶಾಲೆ ಬೆಳ್ಮಣ್ಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ನ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮವನ್ನು ನಡೆಸಿದರು.
ವಿದ್ಯಾರ್ಥಿಗಳಲ್ಲಿ ಹೊಸತನ, ಸೃಜನಶೀಲತೆ ಮತ್ತು ವಿಜ್ಞಾನ – ತಾಂತ್ರಿಕ ಕ್ಷೇತ್ರಗಳತ್ತ ಆಸಕ್ತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ವಿದ್ಯಾರ್ಥಿಗಳ ಆವಿಷ್ಕಾರ ಶಕ್ತಿಯನ್ನು ಬೆಳೆಸುವಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ನ ಪಾತ್ರವನ್ನು ವಿವರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು ತಯಾರಿಸಿದ ಮಾದರಿಗಳು ಮತ್ತು ಪ್ರೋಟೋಟೈಪ್ಗಳನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಲ್ಲಿ ಕುತೂಹಲ ಹೆಚ್ಚಿಸಲು ಸಂವಾದಾತ್ಮಕ ಚರ್ಚೆಗಳು ಹಾಗೂ ಗುಂಪು ಚಟುವಟಿಕೆಗಳನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳು ತಾಂತ್ರಿಕ ವಿಷಯಗಳು ಹಾಗೂ ಭವಿಷ್ಯದ ಅವಕಾಶಗಳ ಕುರಿತು ಚರ್ಚಿಸಿದರು.












