ಉಡುಪಿ ಬಿಜೆಪಿ ಅಭ್ಯರ್ಥಿಗೆ ಶುಭ ಹಾರೈಸಿದ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಇಂದು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಯಶ್ಪಾಲ್ ಸುವರ್ಣ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಪಾಲ್ಗೊಂಡು, ಅಭ್ಯರ್ಥಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿಯ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಮಟ್ಟಾರ್ ರತ್ನಾಕರ್ ಹೆಗ್ಡೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.