ಉಡುಪಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಿರಿಜನ
ಉಪಯೋಜನೆ ಹಾಗೂ ವಿಶೇಷ ಘಟಕ ಯೋಜನೆಯಡಿ ಗುರುಶಿಷ್ಯ ಪರಂಪರೆಯಲ್ಲಿ ಅಕಾಡೆಮಿ ವ್ಯಾಪ್ತಿಯೊಳಗೆ ಬರುವ ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ನೃತ್ಯ (ಭರತನಾಟ್ಯ, ಕಥಕ್, ಕೂಚಿಪುಡಿ), ಕಥಾಕೀರ್ತನ ಮತ್ತು ಗಮಕ ಕ್ಷೇತ್ರಗಳಲ್ಲಿ ಯುವ ಕಲಾವಿದರಲ್ಲಿ ಕಲಾ ನೈಪುಣ್ಯತೆಯನ್ನು ಹೆಚ್ಚಿಸುವ ಸಲುವಾಗಿ ಪ್ರತಿಷ್ಠಿತ ಸಂಸ್ಥೆಯ ಗುರಗಳ ಮೂಲಕ 5 ತಿಂಗಳ ಸಂಗೀತ ನೃತ್ಯ ತರಬೇತಿ ಶಿಬಿರ ಹಮ್ಮಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಗುರುಶಿಷ್ಯ ಪರಂಪರೆ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಹಾಗೂ ಪ್ರತಿಷ್ಠಿತ ಸಂಸ್ಥೆಗಳ ಗುರುಗಳು ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://sangeetanrityaacademy.karnataka.gov.in ಅಥವಾ ಕನ್ನಡ ಮತ್ತು ಸಂಸ್ಕೃತಿ
ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.