ಜ. 22 ರಂದು ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಅರ್ಧ ದಿನದ ರಜೆ ಘೋಷಣೆ

ನವದೆಹಲಿ: ದೇಶವೇ ಕಾಯುತ್ತಿರುವ ಅಮೃತ ಘಳಿಗೆ ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣಪ್ರತಿಷ್ಠೆ. ಅಂದು ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಆಚರಣೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಭಾರತ ಸರ್ಕಾರವು ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರೀಯ ಕೈಗಾರಿಕಾ ಸಂಸ್ಥೆಗಳಲ್ಲಿ ಅರ್ಧ ದಿನದ ರಜೆ ಘೋಷಿಸಿದೆ.

ಈ ಬಗ್ಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯವು ಸುತ್ತೋಲೆ ಹೊರಡಿಸಿದೆ.