ಉಡುಪಿ: ಪದ್ಮಶಾಲಿ ನೇಕಾರ ಪ್ರತಿಷ್ಠಾನ, ಉಡುಪಿ ಹಾಗೂ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ (ರಿ) ಬೆಂಗಳೂರು ವತಿಯಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಪ್ರಯುಕ್ತ ಭಾನುವಾರದಂದು ಕೈಮಗ್ಗ ಸೀರೆಗಳ ಸೌಂದರ್ಯ ಸ್ಪರ್ಧೆ ನಡೆಯಿತು.
ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಮಾಜಿ ಶಾಸಕ ಕೆ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಉದಯಕುಮಾರ್ ಶೆಟ್ಟಿ ಕಿದಿಯೂರು, ಮಟ್ಟಾರು ರತ್ನಾಕರ ಹೆಗ್ಡೆ, ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ, ಮಂಜುನಾಥ ಮಣಿಪಾಲ ಹಾಗೂ ಪ್ರದ್ಮಶಾಲಿ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.