ಹಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಮರಳು ತುಂಬಿದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಯೂನಿಟಿ ಹಾಲ್ ಬಳಿ ಸಂಭವಿಸಿದೆ.

ಮೃತರನ್ನು ಕೃಷ್ಣಮೂರ್ತಿ ಅಡಿಗ ಬೀಜಾಡಿ ಎಂದು ಗುರುತಿಸಲಾಗಿದೆ. ಇವರು ತನ್ನ ಹೋಂಡಾ ಆಕ್ಟಿವಾದಲ್ಲಿ ಕೋಟೇಶ್ವರ ಕಡೆ ತೆರಳುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.