ಸೀನಿಯರ್ ಕಿರುಕುಳ: ಐಪಿಎಸ್ ಅಧಿಕಾರಿ ಎಸ್. ರವಿ ದಿಢೀರ್ ರಾಜೀನಾಮೆ: ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗಲೇ ನಿರ್ಧಾರ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ಅವರು ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನು ಆರು ತಿಂಗಳು ಬಾಕಿ ಇರುವಾಗಲೇ ಅವರು ಈ ನಿರ್ಧಾರ ಕೈಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

1998ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಎಸ್. ರವಿ ಅವರು ಪೊಲೀಸ್ ಮಹಾನಿರ್ದೇಶಕರ (ಡಿಜಿ ಮತ್ತು ಐಜಿಪಿ) ಕಚೇರಿಗೆ ರಾಜೀನಾಮೆ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಯನ್ನು ಡಿಜಿ ಮತ್ತು ಐಜಿಪಿ ಸಲೀಂ ಅವರು ದೃಢಪಡಿಸಿದ್ದಾರೆ ಎನ್ನಲಾಗಿದೆ.