ಹೃದಯಾಘಾತಕ್ಕೆ 22 ವರ್ಷದ ಯುವತಿ ಮೃತ್ಯು.

ಹಾಸನ: ಹೃದಯಾಘಾತಕ್ಕೆ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವತಿ ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ (22). ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ಜೂ.25 ರಂದು ಸುಪ್ರಿಯಾಗೆ ಎದೆನೋವು ಕಾಣಿಸಿಕೊಂಡಿದ್ದು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಕೂಡಲೇ ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಸುಪ್ರಿಯಾ ಸಾವನ್ನಪ್ಪಿದ್ದಾಳೆ.

ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲೇ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.