ಬೆಂಗಳೂರು: ತನ್ನ ವಿರುದ್ದ ಮಿಥ್ಯಾರೋಪ ಮಾಡಿರುವ ಕಾರಣ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲು ಮಾಡಿದ್ದ ಮಾನಹಾನಿ ಕೇಸ್ ವಿಚಾರದಲ್ಲಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಹಿನ್ನಡೆಯಾಗಿದೆ. ಪ್ರಕರಣ ರದ್ದು ಕೋರಿ ರೂಪಾ ಹೈಕೋರ್ಟ್ಗೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
2023 ಫೆಬ್ರವರಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾಡಿದ್ದ ಮಾನಹಾನಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದ ಡಿ ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮಾನನಷ್ಟ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದಲ್ಲಿ ರೂಪಾ ಮೌದ್ಗಿಲ್ ಅವರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು.
ಆ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಮಾಡಿದ್ದ ರೂಪಾ ಅವರ ವಿರುದ್ಧ ಕಾನೂನು ಹೋರಾಟವನ್ನು ರೋಹಿಣಿ ಶುರು ಮಾಡಿದ್ದರು. ಮಾರ್ಚ್ 4ರಂದು ರೋಹಿಣಿ ಸಿಂಧೂರಿ ಸಲ್ಲಿಸಿರುವ ಮಾನಹಾನಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಡಿ ರೂಪಾ ಮನವಿ ಮಾಡಿಕೊಂಡಿದ್ದರು.
ಕೋರ್ಟ್ ಸಮನ್ಸ್ ಬಳಿಕ ಪ್ರಕರಣದಲ್ಲಿ ಕೋರ್ಟ್ಗೆ ಹಾಜರಾಗಿದ್ದ ಡಿ ರೂಪಾ ಅವರು ಜಾಮೀನು ಕೂಡ ಪಡೆದಿದ್ದರು. ಜಾಮೀನು ಪಡೆದುಕೊಂಡ ಬಳಿಕ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಮಾಡಲು ಕೋರಿದ್ದರು.
ಇಂದು ಡಿ ರೂಪಾ ಅವರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಿಚಾರಣೆ ಮಾಡಿದ್ದ ಕೋರ್ಟ್, ಪ್ರಕರಣ ರದ್ದು ಮಾಡಲು ನಿರಾಕರಿಸಿ ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ. ಇದರಿಂದ ಡಿ ರೂಪಾ ಅವರಿಗೆ ಕಾನೂನು ಸಮರದಲ್ಲಿ ಹಿನ್ನಡೆಯಾಗಿದೆ.