ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ರೋಟರಿ ಮಿಡ್ ಟೌನ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳವು ಏಪ್ರಿಲ್ 23 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್. ಮೆಂಡನ್, ಬಿ.ಎಂ. ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಬಿ.ಬಿ.ಎಂ.ಪಿ ವಿಶೇಷ ಆಯುಕ್ತರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.