ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜು.4ರಿಂದ 7ರ ವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.
ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರದಿಂದ ಭಾರಿ ಮಳೆಯಾಗಿದ್ದು, ಶನಿವಾರವೂ ಈ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದೆಂದು ಎಚ್ಚರಿಸಿಯನ್ನು ಸೂಚಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನಾಲ್ಕು ದಿನಗಳವರೆಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.