ಅಗಸ್ಟ್ 03 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗಿದ್ದು, ಈ ಹಿನ್ನಲೆ ಆ.03 ಸೋಮವಾರ  ಜಿಲ್ಲೆಯ ಮಂಗಳೂರು ಉಪವಿಭಾಗದ ಶಾಲೆಗಳಿಗೆ ಮತ್ತು ಪುತ್ತೂರು ಉಪವಿಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ 10 ನೇ ತರಗತಿಯವರೆಗೆ ರಜೆ ಪ್ರಕಟಿಸಲಾಗಿದೆ. ಈ ಆದೇಶವು ಎಲ್ಲಾ ವಸತಿ ಶಾಲೆಗಳಿಗೂ ಕಡ್ಡಾಯವಾಗಿ ಅನ್ವಯವಾಗಲಿದೆ.

ಅದೇ ರೀತಿ ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ (ಪಿಯುಸಿ) ಕಾಲೇಜುಗಳು, ಎಲ್ಲಾ ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ 12 ನೇ ತರಗತಿಯವರೆಗೆ ರಜೆ ನೀಡಲಾಗಿದೆ. ಈ ಉಪವಿಭಾಗದ ಎಲ್ಲಾ ವಸತಿ ಶಾಲಾ-ಕಾಲೇಜುಗಳಿಗೂ ಸಹ ರಜೆ ಘೋಷಿಸಲಾಗಿದೆ.