ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಎಲ್ಲಾ ಶಾಲಾ-ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ

ಉಡುಪಿ: ಏತನ್ಮಧ್ಯೆ, ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು IMD ಮುನ್ಸೂಚನೆ ನೀಡಿದೆ. ಜುಲೈ 25ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಪಿಯು ಕಾಲೇಜುಗಳಿಗೆ ಜುಲೈ 24 ಸೋಮವಾರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಸಮುದ್ರದ ಅಲೆಗಳು 3.4-4 ಮೀಟರ್‌ಗೆ ತಲುಪುವ ಬಗ್ಗೆಯೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಉಡುಪಿಯಲ್ಲಿ ಕಳೆದ 24 ಗಂಟೆಗಳಲ್ಲಿ 163.9 ಮಿ.ಮೀ ಮಳೆಯಾಗಿದೆ.
ಜುಲೈ 23 ರಂದು ಹೊರಡಿಸಲಾದ IMD ಬೆಂಗಳೂರು ಬುಲೆಟಿನ್ ಪ್ರಕಾರ, ಕರಾವಳಿ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಗಂಟೆಗೆ 40-55 ಕಿಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.