ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಕಲಬುರಗಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಬಿರುಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.