ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ.13 ರಿಂದ 15ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.
ಆರೆಂಜ್ ಅಲರ್ಟ್?:
ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಇದೇ 15ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.