ಭಾರೀ ಮಳೆ ಹಿನ್ನಲೆ ಅಗಸ್ಟ್ 8 ರಂದು ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಸೂಚನೆಯ ಹಿನ್ನಲೆಯಲ್ಲಿ ಆ.8ರಂದು ಶನಿವಾರ ದ.ಕ.ಜಿಲ್ಲೆಯ ಪುತ್ತೂರು ಉಪವಿಭಾಗದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗದ ತಾಲೂಕುಗಳಾದ ಪುತ್ತೂರು, ಸುಳ್ಯ, ಕಡಬ,ಬೆಳ್ತಂಗಡಿ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರ, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ, ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳು 12 ನೇ ತರಗತಿವರೆಗೆ (ಎಲ್ಲಾ ವಸತಿ ಶಾಲಾ ಕಾಲೇಜು ಸೇರಿದಂತೆ) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.