ಮೇ 17 ರಿಂದ 21ವರೆಗೆ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ: ಕರ್ನಾಟಕ ಕರಾವಳಿಯ ವಿವಿಧ ಭಾಗಗಳಲ್ಲಿ ಮೇ 17 ರಿಂದ 21ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉದ್ದಕ್ಕೂ ಸಮುದ್ರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮೇ 19 ರಂದು 205 ಮಿಮೀ, ಮೇ 18 ಮತ್ತು 20 ರಂದು 115 ಮಿಮೀ ಹಾಗೂ ಮೇ 17 ಮತ್ತು 21 ರಂದು 65 ಮಿಮೀ. ನಷ್ಟು ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.