ಬೆಂಗಳೂರು: ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಸೆ.26 ಮತ್ತು 27ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ, ಗದಗ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.