ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ ಮುಂದಿನ ಮಂಗಳವಾರದ ವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೆ 23ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಐದು ದಿನಗಳಲ್ಲೂ ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.