ಸಕಲೇಶಪುರ: ಭಾರೀ ಮಳೆಯಿಂದಾಗಿ ಪಶ್ಚಿಮ ಘಟ್ಟದ ಘಾಟಿಗಳು ಕುಸಿಯುತ್ತಿದ್ದು, ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮಾರ್ಗದಲ್ಲಿ ಘನ ವಾಹನಗಳ ಸಂಚಾರವನ್ನು ನಿಸೇಧಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ತಿಳಿಸಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಒಂದು ವಾರದ ಹಿಂದೆ ರಸ್ತೆ ಸ್ವಲ್ಪ ಕುಸಿದಿತ್ತು. ವಿಚಾರ ತಿಳಿದ ಲೋಕೋಪಯೋಗಿ ಇಲಾಖೆ ಸಚಿವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಇದಾದ ನಾಲ್ಕನೇ ದಿನಕ್ಕೆ ಭೂಕುಸಿತವಾಗಿದೆ.