ಉಡುಪಿ: ಎಸ್. ಎನ್.ಸಿ ಗುತ್ತಿಗೆ ಸಂಸ್ಥೆಯ ಕ್ರೇನ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ದಾರುಣವಾಗಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕೆಳಪೇಟೆಯಲ್ಲಿ ಸಂಭವಿಸಿದೆ.
ಸ್ಥಳೀಯ ನಿವಾಸಿ ಚಣಿಲ(65) ಮೃತದುರ್ದೈವಿ. ಇವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ನಡೆದ ನಂತರ ಚಾಲಕ ಕ್ರೇನ್ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ, ಸ್ಥಳೀಯರೆಲ್ಲ ಸೇರಿ ಅವನನ್ನು ತರಾಟೆಗೆ ತೆಗೆದುಕೊಂಡಾಗ ಬಳಿಕ ಸ್ವಲ್ಪ ದೂರದಲ್ಲಿ ಮುಂದೆ ಹೋಗಿ ಕ್ರೇನ್ ನಿಲ್ಲಿಸಿರುತ್ತಾನೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕ್ರೇನ್ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.












