ಉಡುಪಿ: ಕಂಬಿಯೊಳಗೆ ಸಿಲುಕಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಎಂಬಲ್ಲಿ ನಡೆದಿದೆ.
ಆಹಾರ ಅರಿಸಿಕೊಂಡು ಬಂದ ಚಿರತೆ ತಡೆಬೇಲಿಯ ಕಂಬಿಗೆ ಸಿಲುಕಿದ್ದು, ತಪ್ಪಿಸಿಕೊಳ್ಳಲು ಒದ್ದಾಟ ನಡೆಸುತ್ತಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಚಿರತೆ ಅರವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಕಂಬಿಯಿಂದ ಸುರಕ್ಷಿತವಾಗಿ ಚಿರತೆಯನ್ನು ರಕ್ಷಿಸಿ, ಅರಣ್ಯಕ್ಕೆ ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆಯಿಂದ ಸುತ್ತಮುತ್ತಲಿನ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.


















