ಹೆಬ್ರಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ನಡೆದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಎಸ್ ಆರ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪರೀಕ್ಷಿತ್ ಆಚಾರ್ಯ ಪ್ರಥಮ ಸ್ಥಾನ, ನೇಸರ ಎ ಎನ್ ತೃತೀಯ ಸ್ಥಾನ, ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಮತ್ತು ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.


















